*ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ, ಡಿಸಿಎಂ ಆಗಿ ಮಲ್ಲು ಭಟ್ಟಿ ವಿಕ್ರಮಾರ್ಕ ಪ್ರಮಾಣವಚನ*
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಹೈದರಾಬಾದ್ ನ ಎಲ್.ಬಿ ಸ್ಟೇಡಿಯಂ ನಲ್ಲಿ ಮಧ್ಯಾಹ್ನ 1.4ಕ್ಕೆ ನಡೆದ ಪದಗ್ರಹಣ ಸಮಾರಂಭದಲ್ಲಿ ರೇವಂತ್ ರೆಡ್ಡಿ ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಗವರ್ನರ್ ತಮಿಳಿಸೈ ಸೌರಂದರಾಜನ್ ಪ್ರಮಾಣವಚನ ಬೋಧಿಸಿದರು.
ಈ ಮೂಲಕ ತೆಲಂಗಾಣದ 2ನೇ ಸಿಎಂ ಆಗಿ ರೇವಂತ್ ರೆಡ್ಡಿ ಅಧಿಕರ ಸ್ವೀಕರಿಸಿದ್ದಾರೆ. ಡಿಸಿಎಂ ಆಗಿ ಮಲ್ಲು ಭಟ್ಟಿ ವಿಕ್ರಮಾರ್ಕ ಪ್ರಮಾಣವಚನ ಸ್ವೀಕರಿಸಿದರು.
ಇದೇ ವೇಳೆ ನೂತನ ಸಚಿವರಾಗಿ ನಾಲವಾಡ ಉತ್ತಮ್ ಕುಮಾರ್ ರೆಡ್ಡಿ, ಸಿ.ದಾಮೋದರ್ ರಾಜಾನರಸಿಂಹ, ಕೊಮಿಟರೆಡ್ಡಿ, ದುದ್ದಿಲ್ಲ ಶ್ರೀಧರ್ ಬಾಬು, ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, ಪೊನ್ನಂ ಪ್ರಭಾಕರ್, ಕೊಂಡಾ ಸುರೇಖಾ, ಅನಸೂಯಾ ಸೀತಕ್ಕ ಸೇರಿದಂತೆ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ