ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ನಟಿ ಲೀಲಾವತಿ ತಮ್ಮಿಷ್ಟದಂತೆ ತೋಟದ ಮನೆಯಲ್ಲಿಯೇ ಮಣ್ಣು ಸೇರಿದ್ದಾರೆ. ನಿನ್ನೆ ವಿಧಿವಶರಾಗಿದ್ದ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಬೆಂಗಳೂರು ಹೊರವಲಯದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಭಂಟ ಸಮುದಾಯದ ಸಂಪ್ರದಾಯದ ಪ್ರಕಾರ ಲೀಲಾವತಿ ಅವರ ಅಂತ್ಯಕ್ರಿಯೆಯನ್ನು ಮಗ ವಿನೋದ್ ರಾಜ್ ನೆರವೇರಿಸಿದರು.
ಇದಕ್ಕೂ ಮುನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಮಧ್ಯಾಹ್ನ ಆಂಬುಲೆನ್ಸ್ ಮೂಲಕ ಸೋಲದೇವನಹಳ್ಳಿ ತೋಟಕ್ಕೆ ಕರೆದೊಯ್ಯಲಾಯಿತು. ಈ ವೆಳೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ನಟ-ನಟಿಯರು ಲೀಲಾವತಿ ಅವರ ಅಂತಿಮ ದರ್ಶನ ಪಡೆದರು.
ಬಳಿಕ ಜಿಲ್ಲಾಡಳಿತದ ವತಿಯಿಂದ ಮೂರು ಸುತ್ತು ಕುಶಾಲ ತೋಪು ಹಾರಿಸುವ ಮೂಲಕ ಸರ್ಕಾರಿ ಗೌರವ ಸಲ್ಲಿಸಲಾಯಿತು. ನಂತರ ಭಂಟ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ