Belagavi NewsBelgaum NewsKannada NewsKarnataka NewsLatestPolitics

*ಅಂಗನವಾಡಿಗಳಿಗೆ ಸ್ವಂತ ಕಟ್ಟಡಕ್ಕೆ ಕ್ರಮ; ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಸಾಧ್ಯವಾದಷ್ಟುಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಗೆ ಮಾಹಿತಿ ನೀಡಿದರು.

ತಿಪಟೂರು ಷಡಕ್ಷರಿ.ಕೆ ಕೇಳಿದ ಪ್ರಶ್ನೆಗೆ ಸಚಿವರು ಬುಧವಾರ ಉತ್ತರಿಸಿದರು. ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 376 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, 274 ಕೇಂದ್ರಗಳಿಗೆ ಸ್ವಂತಕಟ್ಟಡಗಳಿವೆ. 62 ಬಾಡಿಗೆ ಕಟ್ಟಡಗಳಲ್ಲಿದೆ. 22 ಶಾಲಾ ಆವರಣಗಳಲ್ಲಿ ನಡೆಯುತ್ತಿವೆ. 8 ಸಮುದಾಯಭವನಗಳಲ್ಲಿ ನಡೆಯುತ್ತಿದೆ. 3 ಪಂಚಾಯಿತಿ ಕಟ್ಟಡಗಳಲ್ಲಿ ನಡೆಯುತ್ತಿದೆ. 7 ಇತರ ಕಟ್ಟಡಗಳಲ್ಲಿ ನಡೆಯುತ್ತಿವೆ. ಸ್ವಂತ ಕತ್ಟಡ ನಿರ್ಮಾಣಕ್ಕಾಗಿ ಕಳೆದ 3 ವರ್ಷಗಳಲ್ಲಿ 364 ಲಕ್ಷ ರೂಗಳನ್ನು ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ 4 ಸಾವಿರ ಸರ್ಕಾರಿ ನಿವೇಶನಗಳಿಗೆ ಅಂಗನವಾಡಿ ಹೆಸರು ಹಾಕಿಸಲಾಗಿದೆ. ನಿವೇಶನ ಸಿಕ್ಕ ತಕ್ಷಣ ಅಗತ್ಯವಿರುವ ಎಲ್ಲ ಕಡೆ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಸಾರ್ವಜನಿಕ ಸೌಲಭ್ಯಗಳಿಗಾಗಿ ಮೀಸಲಿಟ್ಟಿರುವ ಸೈಟ್ ಗಳನ್ನು ಅಂಗನವಾಡಿ ಕಟ್ಟಡಕ್ಕೆ ಬಳಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button