ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣ ಇಂದು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷ ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸಂಸದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದರು.
ಲೋಕಸಭಾ ಕಲಾಪಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ವಿಪಕ್ಷದ ಐವರು ಸಂಸದರನ್ನು ಸಂಸತ್ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡುವಂತೆ ಸಂಸದ ಪ್ರಹ್ಲಾದ್ ಜೋಶಿ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಧ್ವನಿಮತದ ಮೂಲಕ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರಾದ ಜ್ಯೋತಿ ಮಣಿ, ಕುರಿಯಾಕೋಸ್, ಐಬಿ ಇಡೆನ್, ಟಿ.ಎನ್.ಪ್ರತಾಪನ್, ರಮ್ಯಾ ಹರಿದಾಸ್, ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ