ಇನ್ನು 3 ಗಂಟೆಗಳಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಸ್ವಲ್ಪ ಬಿಸಿಲಿನ ಮುಖ ಕಂಡ ಬೆಳಗಾವಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನ ಸಂಭ್ರಮಿಸಬೇಕಾದ ಸುದ್ದಿ ಇದಲ್ಲ.
ಬದಲಾಗಿ ಮುಂದಿನ 3 ಗಟೆಯಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಸಂಜೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ , ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಬರುವ 3 ಗಂಟೆಗಳಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.
ಜನರು ಎಚ್ಚರಿಕೆಯಿಂದ ಇರಬೇಕು. ಈ ಎಲ್ಲ ಜಿಲ್ಲೆಗಳಲ್ಲಿ ಅಥವಾ ಇದರಲ್ಲಿ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಈಗಾಗಲೆ ಈ ಎಲ್ಲ ಜಿಲ್ಲೆಗಳಲ್ಲಿ ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳಿಂದ ನಿರಂತರವಾಗಿ ನೀರು ಹೊರಬಿಡಲಾಗುತ್ತಿದೆ. ಹಿಡಕಲ್ ಜಲಾಶಯ ಮತ್ತು ಮಹಾರಾಷ್ಟ್ರದ ಬಹುತೇಕ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡುವ ಮುನ್ಸೂಚನೆ ನೀಡಲಾಗಿದೆ.
ನದಿ ತೀರದಲ್ಲಿ ಇನ್ನೂ ಉಳಿದಿರುವ ಜನರು ಕ್ಷಿಪ್ರ ಸ್ಥಳಾಂತರಕ್ಕೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ