Kannada NewsKarnataka NewsLatest

*ವಂಟಮೂರಿ ಪ್ರಕರಣದ ಬೆನ್ನಲ್ಲೇ ಹಾವೇರಿಯಲ್ಲಿಯೂ ಅಮಾನುಷ ಘಟನೆ; ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಥಳಿತ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಬೆನ್ನಲ್ಲೇ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿಯೂ ಇದೇ ರೀತಿ ಘಟನೆ ನಡೆದಿದ್ದು, ಯುವಕ-ಯುವತಿ ಓಡಿ ಹೋಗಿದ್ದಕ್ಕೆ ವ್ಯಕ್ತಿಯೋರ್ವನನ್ನು ಅರೆಬೆತ್ತಲೆಗೊಳಿಸಿ ಥಳಿಸಲಾಗಿದೆ.

ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಯುವಕ ಚಳಗೇರಿ ಗ್ರಾಮದ ಯುವತಿಯನ್ನು ಪ್ರೀತಿಸಿದ್ದು, ಇಬ್ಬರೂ ಓಡಿ ಹೋಗಿದ್ದಾರೆ. ಇದೇ ಕಾರಣಕ್ಕೆ ಯುವತಿಯ ಕುಟುಂಬದವರು ಯುವಕನ ಸೋದರ ಮಾವನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ.

Home add -Advt

ಯುವಕನ ಸೋದರ ಮಾವ ಪ್ರಶಾಂತ್ ಹಲ್ಲೆಗೊಳಗಾದವರು. ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆ ಎದುರೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆಯನ್ನು ಖಂಡಿಸಿ ಯುವಕನ ಕುಟುಂಬದವರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button