ಪ್ರಗತಿವಾಹಿನಿ ಸುದ್ದಿ; ರಾಮನಗರ: ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಅಟ್ಟಹಾಸ ಆರಂಭವಾಗಿದೆ. ಈಗಗಲೇ ಬೆಂಗಳೂರಿನಲ್ಲೊ ಕೋವಿಡ್ ಗೆ ಮೊದಲ ಬಲಿಯಾಗಿದ್ದು, ಇದರ ಬೆನ್ನಲ್ಲೇ ರಾಮನಗರ ಜಿಲ್ಲೆಯಲ್ಲಿ 2ನೇ ಕೇಸ್ ಪತ್ತೆಯಾಗಿದೆ.
ರಾಮನಗರ ಜಿಲ್ಲೆಯಲ್ಲಿ 2ನೇ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 21 ವರ್ಷದ ಉವತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ನಿನ್ನೆ ರಾಮನಗರ ಜಿಲ್ಲೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಭೈರಮಂಗಲ ಗ್ರಾಮದ ಇಂಜಿನಿಯರಿಂಗ್ ವಿದ್ಯಾರ್ಥಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಅದೇ ಗ್ರಾಮದ ಯುವತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತ ವಿದ್ಯಾರ್ಥಿ ಹಗೂ ಯುವತಿಗೆ ಯಾವುದೇ ಸಂಪರ್ಕ ಇರಲಿಲ್ಲ. ಆದಾಗ್ಯೂ ಒಂದೇ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯಾಗಿದೆ.
ಸೋಂಕಿತ ಯುವತಿಯನ್ನು ರಾಮನಗರ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕವಾಗಿ ಐಸೋಲೇಷನ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಯುವತಿಯ ತಾಯಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ