Kannada NewsKarnataka NewsLatestPolitics
*ನಂದಿನಿ ಬ್ರ್ಯಾಂಡ್ನ ಹೊಸ ಉತ್ಪನ್ನ ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರ್ಯಾಂಡ್ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರ್ಯಾಂಡ್ ರಾಯಭಾರಿ ನಟ ಶಿವರಾಜ್ ಕುಮಾರ್ ಅವರ ಜಾಹೀರಾತನ್ನು ಬಿಡುಗಡೆ ಮಾಡಲಾಯಿತು. ಇದೇ ವೇಳೆ ನಟ ಶಿವರಾಜ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಗೀತಾ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮೊದಲಾದವರು ಭಾಗವಹಿಸಿದ್ದರು.




