Kannada NewsKarnataka NewsLatestPolitics

*ಕೊರೊನಾ ಸೋಂಕು ಹೆಚ್ಚಳ: 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ*

ಆತಂಕ ಬೇಡ; ಆದರೆ ಎಚ್ಚರವಿರಲಿ ಎಂದ ಸಿಎಂ


ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ, ತಜ್ಞರ ಜೊತೆ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕೋವಿಡ್ ನಿಂದಲೇ ಎಂದು ಹೋಳಲಾಗದು, ಕಿಡ್ನಿ ಸಮಸ್ಯೆ, ಶ್ವಾಸಕೋಶ, ಹೃದಯಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದರು.

ರಾಜ್ಯದಲ್ಲಿ 92 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿನ ಬಗ್ಗೆ ಜನರು ಆತಂಕ ಪಡುವುದು ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕು. 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ. ಎಲ್ಲರೂ ಮಾಸ್ಕ್ ಧರಿಸುವುದು ಎಂದು ಸಲಹೆ ನೀಡುತ್ತೇವೆ. ಆದರೆ ಕಡ್ಡಾಯ ಎಂದು ಹೇಳಲ್ಲ. ಆರೋಗ್ಯ ದೃಷ್ಟಿಯಿಂದ ಮಾಸ್ಕ್ ಧರಿಸುವುದು ಉತ್ತಮ ಎಂದು ಸಲಹೆ ನೀಡಿದರು.

ಇನ್ನು ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಜನಸಂದಣಿ ಪ್ರದೇಶಗಳಿಗೆ ತೆರಳುವುದನ್ನು ಕಡಿಮೆ ಮಾಡಿ. ಸಜಸಂದಣಿ ಇರುವ ಪ್ರದೇಶಕ್ಕೆ ಹೋಗುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಿ. ಹೆಚ್ಚಿನ ಜನರ ಸಂಪರ್ಕಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಪ್ರತಿದಿನ 5000 ಜನರಿಗೆ ಕೋವಿಡ್ ಟೆಸ್ಟ್ ಗೆ ಸೂಚಿಸಲಾಗಿದೆ. ಕೋವಿಡ್ ಜೊತೆಗೆ JN.1 ಆತಂಕ ಹೆಚ್ಚಾಗಿದೆ. ಕೋವಿಡ್ ಟೆಸ್ಟ್ ಮಾಡಿದರೆ ಸೋಂಕಿತರ ಸಂಖ್ಯೆ ಹೆಚ್ಚು ಕಂಡುಬರುತ್ತದೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿ ಹೈಲೈಟ್ಸ್:

ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು

ಈಗಿನ ಉಪತಳಿ JN.1 (ಒಮಿಕ್ರಾನ್ ಯಪತಳಿ) ಇದು ಅಪಾಯಕಾರಿಯಲ್ಲ

ಈ ಉಪತಳಿ ರಾಜ್ಯದಲ್ಲಿ 92 ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ICU ನಲ್ಲಿದ್ದಾರೆ. ಆದರೆ ಇವರಿಗೆ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ

ದಿನ‌ 5000 ಟೆಸ್ಟ್ ಗಳು ನಡೆಯುತ್ತವೆ. ಬೆಂಗಳೂರಲ್ಲಿ ಸಾವಿರ ಪರೀಕ್ಷೆ

ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು, ಇವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಬೇಕು

ತತ್ರಿಕ ಸಲಹಾ ಸಮಿತಿ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡಬೇಕು

ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆಅಡಬೇಕು

ಆಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು

ಜಮಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು

ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು

ಪರಿಸ್ಥಿತಿಯನ್ನು over play ಮಾಡಬೇಡಿ ಎಂದು ಮಾಧ್ಯಮದವರಿಗೆ ತಿಳಿ ಹೇಳಿದ ಸಿಎಂ

ಡೆಡಿಕೇಟೆಡ್ ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಇರುತ್ತವೆ. ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು

ಲಸಿಕೆಗಳನ್ನು ಸಿದ್ದವಿಟ್ಟುಕೊಳ್ಳಲು ಸೂಚಿಸಲಾಗಿದೆ

ಕೇರಳದಲ್ಲಿ ಪರೀಕ್ಷೆ ಹೆಚ್ಚು. ಆದ್ದರಿಂದ ಪ್ರಮಾಣ ಕೂಡ ಹೆಚ್ಚಿದೆ. ಇಲ್ಲಿ ಪರೀಕ್ಷೆಗಳು ಹೆಚ್ಚಾದಂತೆ ಪತ್ತೆ ಪ್ರಮಾಣವೂ ಹೆಚ್ಚಾಗಿದೆ

ಮಾಧ್ಯಮದವರು, ಚಾನಲ್ ನವರು ಅನಗತ್ಯ ಪ್ಯಾನಿಕ್ ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ. ಪ್ಯಾನಿಕ್ ಸೃಷ್ಟಿಸಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ ಸಿಎಂ

ಸಾಕಷ್ಟು ಹಣ ಇದೆ. ಕೋವಿಡ್ ನಿರ್ವಹಣೆಗೆ ಹಣಕಾಸಿಗೆ ಕೊರತೆ ಇಲ್ಲ

ಪರಿಸ್ಥಿತಿ ನೋಡಿಕೊಂಡು ಡೆಡಿಕೇಡೆಡ್ ಆಸ್ಪತ್ರೆಗಳನ್ನು ನಿಗಧಿ ಮಾಡುತ್ತೇವೆ

ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button