Kannada NewsKarnataka NewsLatest

*ಬೆಂಗಳೂರಿನ ಶಾಲೆಯಲ್ಲಿಯೂ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಆಡಳಿತ ಮಂಡಳಿ ವಿರುದ್ಧ ಸ್ಥಳೀಯರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋಲಾರದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಗುಂಡಿ ಸ್ವಚ್ಛತೆ ಮಾಡಿಸಿದ್ಧ ಪ್ರಕರಣ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಅಂತದ್ದೇ ಘಟನೆ ಬೆಳಕಿಗೆ ಬಂದಿದೆ.

Home add -Advt

ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್ ಮಾಡಿಸಲಾಗುತ್ತಿದ್ದು, ಈ ಕುರಿತ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುತ್ತಿರುವುದು ಗೊತ್ತಾಗುತ್ತಿದ್ದಂತೆ ಪೋಷಕರು, ಸ್ಥಳೀಯರು ಶಾಲಾ ಆಡಳಿತ ಮಂಡಳಿ, ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಶಾಲೆಗೆ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button