Kannada NewsKarnataka NewsLatest

*ಕೊರೊನಾ ಸೋಂಕಿಗೆ ಮತ್ತೊಂದು ಬಲಿ; 40 ವರ್ಷದ ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಕ್ತಿಯೋರ್ವರನ್ನು ಮಹಾಮಾರಿ ವೈರಸ್ ಬಲಿ ಪಡೆದಿದೆ.

Home add -Advt

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ 40 ವರ್ಷದ ವ್ಯಕ್ತಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಉಸಿರಾಟದ ತೊಂದರೆಯಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯಲ್ಲಿ 2 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದಿತ್ತು. ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಮೃತ ವ್ಯಕ್ತಿ ಉತ್ತರ ಭಾರತ ಮೂಲದವರೆಂದು ತಿಳಿದುಬಂದಿದೆ. 40 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾದ ಬೆನ್ನಲ್ಲೇ ಜಿಲ್ಲೆಯಾದ್ಯಂತ ಆತಂಕ ಶುರುವಾಗಿದೆ

Related Articles

Back to top button