ಪ್ರಗತಿವಾಹಿನಿ ಸುದ್ದಿ, ಸುವರ್ಣ ವಿಧಾನ ಸೌಧ, ಬೆಳಗಾವಿ
ಮೌಲಾನಾ ಆಜಾದ್ ಶಾಲೆಗಳಿಗೂ ಮಧ್ಯಾಹ್ನದ ಬಿಸಿಯೂಟ ವಿಸ್ತರಿಸಿರುವುದಾಗಿ ಆಹಾರ ಮತ್ತು ನಾಗರೀಕ ಸರಬರಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬುಧವಾರ ತನ್ವೀರ್ ಸೇಠ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಮೌಲಾನಾ ಆಜಾದ್ ಶಾಲಾ ಮಕ್ಕಳಿಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳಿಗೆ ಒದಗಿಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಸ್ತರಿಸಿರುವುದಾಗಿ ಅವರು ತಿಳಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ೨೦೧೭-೧೮ನೇ ಸಾಲಿನಲ್ಲಿ ೧೦೦ ಶಾಲೆಗಳನ್ನು ಆರಂಭಿಸಲಾಗಿದ್ದು ಆರು ಮತ್ತು ಏಳನೇ ತರಗತಿಗಳು ಕಾರ್ಯನಿರ್ವಹಿಸುತ್ತಿವೆ. ೨೦೧೮-೧೯ನೇ ಸಾಲಿನಲ್ಲಿ ೧೦೦ ಶಾಲೆಗಳನ್ನು ಪ್ರಾರಂಭಿಸಲು ಆದೇಶ ನೀಡಲಾಗಿದ್ದು, ಈ ಪೈಕಿ ೯೭ ಶಾಲೆಗಳು ಪ್ರಾರಂಭವಾಗಿದ್ದು ಭೂಮಿಯ ಸಮಸ್ಯೆಯಿಂದ ಬಾಕಿ ಮೂರು ಶಾಲೆಗಳು ಆರಂಭವಾಗಿರುವುದಿಲ್ಲ. ಸರ್ಕಾರಿ ಮೌಲಾನಾ ಆಜಾದ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ಪಠ್ಯಪುಸ್ತಕ, ಸಮವಸ್ತ್ರ, ನೋಟ್ ಪುಸ್ತಕಗಳು, ಲೇಖನ ಸಮಗ್ರಿಗಳು ಹಾಗೂ ಶೂ ಮತ್ತು ಸಾಕ್ಸ್ಗಳನ್ನು ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ