Kannada NewsKarnataka NewsLatest

*ವಿಶ್ವವಿದ್ಯಾಲಯ ಚುನಾವಣೆಯಲ್ಲಿ ಸೋಲು; ಮನನೊಂದ ನೌಕರ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಚಂದ್ರಕಾಂತ್ ಸಾವಳಗಿ (55) ಆತ್ಮಹತ್ಯೆಗೆ ಶರಣಾದ ಕರ್ನಾಟಕ ವಿಸ್ವ ವಿದ್ಯಾಲಯದ ನೌಕರ. ಕರ್ನಾಟಕ ವಿಶ್ವವಿದ್ಯಾಲಯ ನೌಕರರ ಸಂಘದ ಚುನಾವಣೆ ಇತ್ತೀಚೆಗೆ ನಡೆದಿತ್ತು. ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಆಗಿದ್ದ ಚಂದ್ರಕಾಂತ್ ಸಾವಳಗಿ ಕೂಡ ಸ್ಪರ್ಧಿಸಿದ್ದರು. ಆದರೆ ಸೋಲನುಭವಿಸಿದ್ದರು ಎನ್ನಲಾಗಿದೆ.

Home add -Advt

ಫಲಿತಾಂಶ ಹೊರಬೀಳುತ್ತಿದ್ದಂತೆ ಶನಿವಾರ ಧಾರವಾಡದ ಮುರುಘಾ ಮಠ ಬಳಿಯ ಮನೆಗೆ ವಾಪಸ್ ಆದ ಚಂದ್ರಕಾಂತ್ ಬಳಿಕ ಮನೆ ಬಾಗಿಲು ತೆರೆದಿರಲಿಲ್ಲ. ಕಳೆದ ನಾಲ್ಕು ದಿನಗಳಿಂದ ಮನೆಯಿಂದ ಹೊರಬರದಿದ್ದಾಗ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲಿಸರು ಬಾಗಿಲು ತೆರೆದಾಗ ಚಂದ್ರಕಾಂತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ವಿಶ್ವವಿದ್ಯಾಲಯದ ನೌಕರರ ಸಂಘದ ಚುನಾವಣೆಯಲ್ಲಿ ಸೋತ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


Related Articles

Back to top button