Kannada NewsKarnataka NewsLatest
*ಶಿಕ್ಷಣ ಸಚಿವರ ತವರಲ್ಲೇ ಮರುಕಳಿಸಿದ ಅಮಾನವೀಯ ಘಟನೆ; ಮಕ್ಕಳಿಂದಲೇ ಶಾಲೆಯ ಶೌಚಾಲಯ ಸ್ವಚ್ಛತೆ*
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕೋಲಾರದ ವಸತಿ ಶಾಲೆ, ಬೆಂಗಳೂರಿನ ಪೀಣ್ಯದ ಸರ್ಕಾರಿ ಶಾಲೆಗಳಲ್ಲಿ ನಡೆದಿದ್ದ ಅಮಾನವೀಯ ಘಟನೆ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿಯೂ ಮರುಕಳಿಸಿದ್ದು, ವಿದ್ಯಾರ್ಥಿಗಳಿಂದಲೇ ಟಾಯ್ಲೇಟ್ ಸ್ವಚ್ಛ ಮಾಡಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ. ವಿದ್ಯಾರ್ಥಿಗಳು ಟಾಯ್ಲೇಟ್ ಕ್ಲೀನ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಾಲೆಯ ಮುಖ್ಯಶಿಕ್ಷಕ ಶಂಕರಪ್ಪ ಹಾಗೂ ಸಹ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ