LatestNational

*ಟೀ ಅಂಗಡಿಗೆ ನುಗ್ಗಿದ ಟ್ರಕ್; ಭೀಕರ ಅಪಘಾತದಲ್ಲಿ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಟ್ರಕ್ ಚಾಲಕನೊಬ್ಬ ಟೀ ಅಂಗಡಿಗೆ ಟ್ರಕ್ ನುಗ್ಗಿಸಿದ್ದು ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ಸಂಭವಿಸಿದೆ.

ಸಿಮೆಂಟ್ ತುಂಬಿದ ಟ್ರಕ್ ವೇಗವಾಗಿ ಬಂದಿದ್ದು, ನಿದ್ರೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಬದಿಯಲ್ಲಿದ್ದ ಟೀ ಅಂಗಡಿಗೆ ನುಗ್ಗಿದೆ.

Home add -Advt

ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 19 ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಟೀ ಅಂಗಡಿ ಬಳಿ ನಿಲ್ಲಿಸಿದ್ದ ಕಾರು ಹಾಗೂ ಇತರ ವಾಹನಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.


Related Articles

Back to top button