ರೋಗಗಳ ಬಗ್ಗೆ ಮುನ್ನೆಚ್ಚರಿಕೆ ಇರಲಿ
ದಕ್ಷಿಣ ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾಗಿರುವ ತೀವ್ರತರವಾದ ಪ್ರವಾಹದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗುತ್ತಿದೆ.
ಮಳೆ ನಿಂತ ನಂತರ ಅಲ್ಲಿಲ್ಲಿ ನೀರು ನಿಲ್ಲುವುದರಿಂದ ಅಪಾಯಕಾರಿ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಟೈಫೈಡ್, ಕಾಲರಾ, ಇಲಿ ಜ್ವರ, ಕಾಮಾಲೆ, ಡೆಂಗ್ಯೂ, ಮಲೇರಿಯಾ, ಚುಕೂನ್ ಗುನ್ಯಾ ಮೊದಲಾದ ರೋಗಗಳು ಬರುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ನಿಯತಿ ಫೌಂಡೇಶನ್ ಅಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಎಚ್ಚರಿಸಿದ್ದಾರೆ.
ಶುದ್ಧ ನೀರು ಕುಡಿಯಬೇಕು. ಸೊಳ್ಳೆಗಳನ್ನು ನಿಯಂತ್ರಿಸಬೇಕು. ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
ಡೆಂಗ್ಯೂ ಮತ್ತು ಚಿಕೂನ್ ಗುನ್ಯಾಕ್ಕೆ ಗೋವಾವೇಸ್ ಅಮರ್ ಎಂಪೈರ್ ನಲ್ಲಿರುವ ಡಾ.ಸರ್ನೋಬತ್ ಕ್ಲಿನಿಕ್ ನಲ್ಲಿ ಉಚಿತವಾಗಿ ಔಷಧ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9916106896 ನಂಬರ್ ಸಂಪರ್ಕಿಸಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ