Kannada NewsKarnataka NewsLatestPolitics

*ಕರಸೇವಕರ ಬಂಧನದ ಹಿಂದಿನ ಉದ್ದೇಶವೇನು? ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಸೇವಕರನ್ನು ಬಂಧಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಮ ಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹಿಂದೂ ಕರಸೇವಕರ ಬಂಧನ ಮಾಡಿರುವುದು ಖಂಡನೀಯ ಎಂದು ಗುಡುಗಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ. ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವಾಗ ಕಾಂಗ್ರೆಸ್ ಮಾತ್ರ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ. ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ ಎಂದು ಹೇಳಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button