ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಏಕಾಏಕಿ ಮಳೆಯಿಂದಾಗಿ ಅಡಿಕೆ, ಭತ್ತ, ಕಾಪಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ರಾಜ್ಯದ ಹಲವೆಡೆ 4-5 ದಿನಗಳ ಕಾಲ ಮಳೆಯಾಗಲಿದೆ. ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಚಿಕ್ಕಂಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಿದೆ.
ಬೆಂಗಳೂರಿನಲ್ಲಿ ಸಂಪೂರ್ನ ಮೂಡಕವಿದ ವಾತಾವರನವಿದ್ದು, ಶೀತಗಾಳಿ ಬೀಸುತ್ತಿದೆ. ಶಿವಮೊಗ್ಗ, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡಿನ ರೈತರು ಅಡಿಕೆ, ಭತ್ತ, ಕಾಫಿ ಕೊಯ್ಲು ಆರಂಭಿಸಿದ್ದ ವೇಳೆಯೇ ಏಕಾಏಕಿ ಮಳೆ ಶುರುವಾಗಿದ್ದು, ಹಲವೆಡೆ ಬೆಳೆನಾಶವಾಗಿ ರೈತರು ಕಂಗಾಲಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ