ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದ ಜೇವರ್ಗಿ ಬಳಿ ನಡೆದಿದೆ.
ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದಿದೆ. ಶಾಸಕ ಎಂ.ವೈ.ಪಾಟೀಲ್ ಹಾಗೂ ಕಾರು ಚಾಲಕ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರೂ ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ