Kannada NewsKarnataka NewsLatest
*ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್; ಓರ್ವ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಖಾಸಗಿ ಬಸ್ ವೊಂದು ಕಂದಕಕ್ಕೆ ಉರಿಳಿಬಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ. ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, 25 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲಿಸಿದ್ದಾರೆ.




