Belagavi NewsBelgaum NewsKannada NewsKarnataka NewsLatest

*ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣ; 7 ಆರೋಪಿಗಳು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೇರೆ ಬೇರೆ ಕೋಮಿನ ಪ್ರೇಮಿಗಳೆಂದು ತಿಳಿದು ಸಹೋದರ ಹಾಗೂ ಸಹೋದರಿ ಮೇಲೆ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಕೋಟೆಕೆರೆ ಆವರಣದಲ್ಲಿ ನಡೆದಿತ್ತು.

Home add -Advt

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಯುವಕ ಹಾಗೂ ಯುವತಿಯನ್ನು ರಕ್ಷಿಸಿದ್ದರು. ಹಲ್ಲೆಗೊಳಗಾದ ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ 7 ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. 17 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.


Related Articles

Back to top button