ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಿಗ್ಗೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಮಧ್ಯಾಹ್ನ ಮತ್ತೆ ಜೈಲು ಸೇರಿದ್ದಾರೆ.
2017ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯನಗೌಡ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿಸಿ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಕೋರ್ಟ್ ನಾರಾಯಣಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ನಾರಾಣಗೌಡ ಮತ್ತೆ ಜೈಲು ಸೇರಿದ್ದಾರೆ.
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆ, ನಾಮಫಲಕ ದ್ವಂಸ ಪ್ರಕರಣ ಸಂಬಂಧ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಹಾಗೂ 28 ಕಾರ್ಯಕರ್ತರು ಇಂದು ಬೆಳಿಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಜೈಲಿನಿಂದ ಬಿಡುಗಡೆಯಾಗಿ ಹೊರಬರುತ್ತಿದ್ದಂತೆಯೇ ಕುಮಾರಸ್ವಾಮಿ ಲೇಔಟ್ ಪೊಲೀಸರು ನಾರಾಯಣಗೌಡ ಅವರನ್ನು 2017ರ ಪ್ರಕರಣ ಸಂಬಂಧ ಮತ್ತೆ ಬಂಧಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ