Kannada NewsLatestNational

*ಶಾಲಾ ಬಸ್ ಅಪಘಾತ; ಇಬ್ಬರು ವಿದ್ಯಾರ್ಥಿನಿಯರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಜೈಪುರ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 52 ಮಕ್ಕಳಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇಬ್ಬರು ವಿದ್ಯಾರ್ಥಿಯರು ಸಾವನ್ನಪ್ಪಿದ್ದು, ಮೂವರು ಶಿಕ್ಷಕರು ಸೇರಿ 15 ಜನರು ಗಾಯಗೊಂಡಿದ್ದಾರೆ.

ಸೋಮ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳನ್ನು ಶಿಯೋಗಂಜ್ ಆಸ್ಪತ್ರೆಗೆ ದಾಖಲಿಸ್ದಲಾಗಿದೆ.


Related Articles

Back to top button