Kannada NewsKarnataka NewsLatestPolitics

*ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲಾಗಿದೆ. ದ್ವೇಷ ಭಾಷಣ ಹಿನ್ನೆಲೆಯಲ್ಲಿ ಸುಮೊಟೋ ಕೇಸ್ ದಾಖಲಿಸಲಾಗಿದೆ.

ಕುಮಟಾದಲ್ಲಿ ಕಾರ್ಯಕರ್ತರ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153ರಡಿ ಪ್ರಕರಣ ದಾಖಲಾಗಿದೆ.

Home add -Advt

ಎರಡು ದಿನಗಳ ಹಿಂದೆ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಂಸದ ಅನಂತ ಕುಮಾರ್ ಹೆಗಡೆ, ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದಪಳ್ಳಿ ಮಸೀದಿ ನಿರ್ನಾಮ ಮಾಡುತ್ತೇವೆ. ಇದು ಸಾವಿರಾರು ವರ್ಷಗಳ ಸೇಡು. ಎಲ್ಲೆಲ್ಲಿ ದೇವಸ್ಥಾನಗಳನ್ನು ಒಡೆದು ಹಾಕಿ ಮಸೀದಿ ನಿರ್ಮಿಸಿದ್ದಾರೋ ಅಲ್ಲೆಲ್ಲ ಮಸೀದಿ ನಿರ್ನಾಮ ಮಾಡಿ ದೇವಸ್ಥಾನವನ್ನು ನಿರ್ಮಿಸುತ್ತೇವೆ. ಋಣ ಇಟ್ಟುಕೊಳ್ಳುವ ಸಮಾಜ ನಮ್ಮದಲ್ಲ. ಸೇಡಿಗೆ ಸೇಡು. ಋಣ ತೀರಿಸದಿದ್ದರೆ ಹಿಂದೂ ರಕ್ತ ಎನ್ನಲ್ಲ… ಎಂದು ಭಾಷಣ ಮಾಡಿದ್ದರು. ಇದೇ ವೇಳೆ ರಾಮ ಮಂದಿರ ಉದ್ಘಾಟನೆ ದಿನ ಅಯೋಧ್ಯೆಗೆ ಹೋಗಲ್ಲ ನಂತರ ಅಯೋಧ್ಯೆಗೆ ಹೋಗಿ ರಾಮ ಮಂದಿರ ನೋಡಿಕೊಂಡು ಬರುತ್ತೇನೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.

ಸಂಸದ ಅನಂತ ಕುಮಾರ್ ಹೆಗಡೆ ಭಾಷಣ ತೀವ್ರ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಇದೀಗ ಸಂಸದರ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ.


Related Articles

Back to top button