ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ.
ಜನೆವರಿ 21ರಂದು ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿತ್ತು. ಸೋಮವಾರ ಬೆಳಗ್ಗೆಯಷ್ಟೆ ಈ ಸಮಾವೇಶದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿವರ ಮಾಹಿತಿ ನೀಡಿದ್ದರು. ಎಐಸಿಸಿ ಅಧ್ಯಕ್ಷರೂ ಸಮಾವೇಶದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದರು. ಆದರೆ ಸಂಜೆ ಸಮಾವೇಶ ಮುಂದೂಡಿರುವ ಕುರಿತು ಅವರು ಪ್ರಕಟಣೆ ನೀಡಿದ್ದಾರೆ.
ಸಮಾವೇಶ ನಡೆಸುವ ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು. ಈ ಹಿನ್ನೆಲೆಯಲ್ಲಿ ಈ ಸಮಾವೇಶ ನಡೆಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕಾರ್ಯಗಳನ್ನು ಹಾಗೆಯೇ ಮುಂದುವರೆಸಬೇಕಾಗಿ ಕೋರುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಸಮಾವೇಶ ಮುಂದೂಡಿದ ಕಾರಣವನ್ನು ಅವರು ತಿಳಿಸಿಲ್ಲ.
ಜ.19ರಂದು ಬೆಂಗಳೂರಿನಲ್ಲಿ ಸಂಜೆ 4 ಗಂಟೆಗೆ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ