Kannada NewsLatestNationalPolitics

*ಕಾಂಗ್ರೆಸ್ ನಾಯಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಪಂಜಾಬ್ ಮಾಜಿ ಸಚಿವ ಸಾಧು ಸಿಂಗ್ ಧರಮ್ ಸೋತ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಬಗ್ಗೆ ಇಡಿ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದು, ಸಾಧು ಸಿಂಗ್ ಧರಮ್ ಸೋತ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Home add -Advt

ಈ ಹಿಂದೆ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಸಾಧು ಸಿಂಗ್ ಅವರನ್ನು ಎರಡು ಬಾರಿ ಬಂಧಿಸಿತ್ತು. ಪಂಜಾಬ್ ಅರಣ್ಯ ಇಲಾಖೆ ಮಾಜಿ ಸಚಿವರಾಗಿದ್ದ ಸಾಧು ಸಿಂಗ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ಅಕ್ರಮ ಹಾಗೂ ಪರವಾನಗಿ ನೀಡಲು ಲಂಚ ಪಡೆದ ಆರೋಪ ಕೇಳಿಬಂದಿದೆ.


Related Articles

Back to top button