Kannada NewsKarnataka NewsLatestPolitics

ನೆರೆ ಪೀಡಿತ ಪ್ರದೇಶಗಳಿಗೆ ಡಾ.ಪ್ರಭಾಕರ ಕೋರೆ ಸಹಾಯ

ನೆರೆ ಪೀಡಿತ ಪ್ರದೇಶಗಳಿಗೆ ಡಾ.ಪ್ರಭಾಕರ ಕೋರೆ ಸಹಾಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ಮಹಾಮಳೆಯಿಂದ ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ ಲಕ್ಷಾಂತರ ಜನರು ನಿರಾಶ್ರಿತರಾಗಿರುವುದು ದುರ್ದೈವದ ಸಂಗತಿ ಎಂದು ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದರು.
ಅವರು ಸ್ವಗ್ರಾಮ ಚಿಕ್ಕೋಡಿ ತಾಲೂಕಿನ ಅಂಕಲಿಯಲ್ಲಿ ಕೃಷ್ಣಾ ನದಿಯಿಂದ ಬಂದ ಮಹಾಪ್ರವಾಹದ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ ಮಾತನಾಡಿದರು.

ಕಳೆದ ನಾಲ್ಕು ದಿನಗಳಿಂದ ಡಾ.ಪ್ರಭಾಕರ ಕೋರೆ ಚಿಕ್ಕೋಡಿ ಭಾಗದಲ್ಲಿಯೇ ಠಿಕಾಣಿ ಹೂಡಿದ್ದು, ಖುದ್ದಾಗಿ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡುವ ಮೂಲಕ ಅವರಿಗೆ ಅಗತ್ಯ ಸೇವೆಗಳನ್ನು ನೀಡುತ್ತಿದ್ದಾರೆ.
ಶತಮಾನದ ಮಹಾಮಳೆ ಜನರ ಬದುಕನ್ನು ಸರ್ವನಾಶ ಮಾಡಿದೆ. ಅನೇಕರು ಮನೆ ಹಾಗೂ ಜಾನುವಾರುಗಳನ್ನು ಕಳೆದುಕೊಂಡಿದ್ದಾರೆ. ಅವರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ಅವರಿಗೆ ಬೇಕಾದ ಅಗತ್ಯ ಸೌಕರ‍್ಯಗಳನ್ನು ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈ ಕುರಿತು ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿವೆ. ನಿರಾಶ್ರಿತರಾದವರು ಎದೆಗುಂದುವಂತಿಲ್ಲ, ಸರ್ಕಾರ ಅವರ ಬೆನ್ನಿಗಿದೆ. ಪ್ರಾಕೃತಿಕ ವಿಪತ್ತುಗಳನ್ನು ಎದುರಿಸಲು, ಪರಿಹರಿಸಲು ಇಚ್ಛಾಶಕ್ತಿಯ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯಸರ್ಕಾರವು ದಿಟ್ಟಕ್ರಮಗಳನ್ನು ಕೈಗೊಳ್ಳಲಿದೆ ಎಂದು ಡಾ.ಪ್ರಭಾಕರ ಕೋರೆ ಹೇಳಿದ್ದಾರೆ.
ಈಗಾಗಲೇ ರಾಯಬಾಗ ತಾಲೂಕಿನ ಯಡ್ರಾವ, ನಸಲಾಪುರ, ಬಾವನಸೌಂದತ್ತಿ, ಹಳೆ ಹಾಗೂ ಹೊಸ ದಿಗ್ಗೇವಾಡಿ, ಜಲಾಲಪುರ, ಬಿರ್ಡಿ ಮತ್ತು ಚಿಂಚಲಿ ಗ್ರಾಮಗಳಿಗೆ ಡಾ.ಕೋರೆ ಭೇಟಿ ನೀಡಿ, ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button