*ಇಂದು ಮಧ್ಯರಾತ್ರಿಯಿಂದ ಲಾರಿ, ಟ್ರಕ್ ಸಂಚಾರ ಸ್ಥಗಿತ; ಅನಿರ್ಧಿಷ್ಟಾವಧಿವರೆಗೆ ಮುಷ್ಕರ*
ಪ್ರಗತಿವಾಹಿನಿ ಸುದ್ದಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ಹೊಸ ಕಾನೂನು ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಇಂದು ಮಧ್ಯರಾತ್ರಿಯಿಂದ ದೇಶಾದ್ಯಂತ ಲಾರಿ ಮುಷ್ಕರ ಆರಂಭವಾಗಲಿದೆ.
ಇಂದು ಮಧ್ಯರಾತ್ರಿಯಿಂದ 2 ಲಕ್ಷಕ್ಕೂ ಅಧಿಕ ಲಾರಿಗಳು ಸಂಚಾರ ಸ್ಥಗಿತಗೊಳಿಸಲಿದ್ದು, ಇಂದಿನಿಂದ ಅನಿರ್ಧಿಷ್ಟಾವಧಿವರೆಗೆ ಮುಷ್ಕರ ನಡೆಯಲಿದೆ.
ಲಾರಿ, ಗೂಡ್ಸ್ ವಾಹನಗಳ ಮುಷ್ಕರದಿಂದಾಗಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಸರಕು ಸಾಗಣೆಯಲ್ಲಿ ಭಾರಿ ವ್ಯತ್ಯಯ ಉಂಟಾಗುವ ಸಾಧ್ಯತೆ ದಟ್ಟವಾಗಿದೆ. ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘವೂ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರು ಹಾಗೂ ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ.
ಹಿಟ್ ಆಂಡ್ ರನ್ ಕೇಸ್ ನಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂಪಾಯಿ ದಂಡ ವಿಧಿಸುವ ಹೊಸ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಹೊಸ ಕಾನೂನು ಜಾರಿ ಹಿಂಪಡೆಯುವಂತೆ ಒತ್ತಾಯಿಸಿ ಲಾರಿ ಮಾಲೀಕರು ಹಾಗೂ ಚಾಲಕರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ