Kannada NewsLatestNational

*ದೋಣಿ ದುರಂತ: ವಿದ್ಯಾರ್ಥಿಗಳು ಸೇರಿ 14 ಜನರು ಜಲಸಮಾಧಿ*

ಪ್ರಗತಿವಾಹಿನಿ ಸುದ್ದಿ: ದೋಣಿ ಮುಳುಗಿ ವಿದ್ಯಾರ್ಥಿಗಳು ಸೇರಿ 14 ಜನರು ಜಲಸಮಾಧಿಯಾಗಿರುವ ಘಟನೆ ಗುಜರಾತ್ ನ ವಡೋದರಾದ ಹರಣಿ ಸರೋವರದಲ್ಲಿ ನಡೆದಿದೆ.

ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಹಲವರು ದೋಣಿಯಲ್ಲಿ ಸಾಗುತ್ತಿದ್ದರು. ಈ ವೇಳೆ ಏಕಾಏಕಿ ದೋಣಿ ಮಗುಚಿದ್ದು, 14 ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹಲವರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.

Home add -Advt

ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ದೋಣಿಯಲ್ಲಿ ವಿಹರಿಸುತ್ತಿದ್ದ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಲೈಫ್ ಜಾಕೇಟ್ ಧರಿಸಿರಲಿಲ್ಲ. ಇದು ಕೂಡ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ.

ದೋಣಿ ದುರಂತದಲ್ಲಿ 14 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


Related Articles

Back to top button