Kannada NewsKarnataka NewsLatest

*ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿಳುಕುಪ್ಪ ಗ್ರಾಮದಲ್ಲಿ ನಡೆದಿದೆ.

ಅಧೀಕ್ಷಾ (20) ಮೃತ ವಿದ್ಯಾರ್ಥಿನಿ. ಬಾಳೆಬೈಲು ಪದವಿ ಕಲೇಜಿನಲ್ಲಿ ಓದುತ್ತಿದ್ದಳು. ತಂದೆ-ತಾಯಿ ಮನೆಯಲ್ಲಿ ಇಲ್ಲದಿರುವಾಗ ವಿದ್ಯಾರ್ಥಿನಿ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ.

Home add -Advt

ಅಧೀಕ್ಷಾ ಇಂದು ಬೆಳಿಗ್ಗೆ ಎಷ್ಟು ಹೊತ್ತಾದರೂ ರೂಮಿನಿಂದ ಹೊರ ಬಂದಿಲ್ಲ. ಕರೆದರೂ ಬಾಗಿಲು ತೆರೆದಿಲ್ಲ. ಅನುಮಾನಗೊಂಡು ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


Related Articles

Back to top button