*ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅಭಿನಂಧಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ*
ಪ್ರಗತಿವಾಹಿನಿ ಸುದ್ದಿ: ಶರಣ ಶ್ರೇಷ್ಠ ಬಸವಣ್ಣ ನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ ಅಪಾರ ಸಂತಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೃಹತ್ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿ, ಅಭಿನಂದನಾ ನುಡಿಗಳನ್ನು ಆಡಿದರು.
ಡಾ.ಶ್ರೀ ಶ್ರೀ ಶಿವಕುಮಾರ ಶಿವಮೂರ್ತಿಶಿವಯೋಗಿಗಳವರ 5 ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಮೊದಲಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಉದ್ಘಾಟಿಸಿ, ಶ್ರೀಗಳ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪರಮಪೂಜ್ಯ ಸಿದ್ಧಲಿಂಗ ಮಹಾಸ್ವಸಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಡಾ.ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಉತ್ತರಾಧಿಕಾಧಿಕಾರಿಗಳಾದ ಶಿವ ಸಿದ್ಧೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆದವು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ರಾಜಣ್ಣ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಜ್ಯೋತಿಗಣೇಶ್, ಸುರೇಶ್ ಗೌಡ, ಶ್ರೀನಿವಾಸ್ ಹಾಗೂ KRIDL ನ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ