Kannada NewsKarnataka NewsLatestPolitics

*ನಾಳೆ ರಾಮ ಮಂದಿರ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನಾಳೆ ಜನವರಿ 22ರಂದು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಇದನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಇದೇ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಳೆ ಬೆಂಗಳೂರಿನಲ್ಲಿಯೂ ರಾಮ ಮಂದಿರ ಉದ್ಘಾಟನೆ ಇದೆ. ಬೆಂಗಳೂರಿನ ಮಹದೇವಪುರದಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವಿದ್ದು, ನಾನು ಭಾಗವಹಿಸಲಿದ್ದೇನೆ ಎಂದು ತಿಳಿಸಿದರು.

Home add -Advt

ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ನಾಳೆ ವಿಶೇಷ ಪೂಜೆ ಇರಲಿದೆ. ಇನ್ನು ನಾಳೆ ದಾಸೋಹ, ಪಾನಕ, ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿಯಲ್ಲಿ ಶ್ರೀರಾಮ ಟ್ರಸ್ಟ್ ಸೀತಾ-ರಾಮ, ಲಕ್ಷ್ಮಣ, ಆಂಜನೇಯ ದೇವಾಲಯ ನಿರ್ಮಿಸಿದ್ದು, ಈ ದೇವಾಲಯವನ್ನು ನಾಳೆ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸೀತಾ-ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.


Related Articles

Back to top button