Kannada NewsKarnataka NewsLatest
*ಭೀಕರ ಅಪಘಾತ; ಫುಟ್ಬಾಲ್ ಆಟಗಾರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ರಾಜ್ಯದ ಫುಟ್ಬಾಲ್ ಆಟಗಾರರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ಬಳಿ ನಡೆದಿದೆ.
27 ವರ್ಷದ ಮೊನಿಶ್ ಕೆ ಮೃತ ದುರ್ದೈವಿ. ರಾಮಮೂರ್ತಿ ನಗರದ ಮೇಲ್ಸೇತುವೆ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಬೈಕ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೊನಿಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




