Belagavi NewsBelgaum NewsKannada NewsLatestPolitics

*ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕಾರ್ಮಿಕ ಇಲಾಖೆಯ ವತಿಯಿಂದ ಪಿಯುಸಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ (ಜ.22) ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸಾಂಕೇತಿಕವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಿದರು.

Home add -Advt

ಈ ವೇಳೆ ಮಾತನಾಡಿದ ಸಚಿವರು ವಿದ್ಯಾರ್ಥಿಗಳಿಗೆ ನೀಡಿದ ಲ್ಯಾಪ್ ಟಾಪ್ ಸದ್ಬಳಕೆ ಆಗಬೇಕು. ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ. ಇದರ ಬಳಕೆ ಮೌಲ್ಯದಾಯಕವಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಉಪ ಕಾರ್ಮಿಕ ಆಯುಕ್ತರಾದ ಅನ್ಸಾರಿ, ಕಾರ್ಮಿಕ ಅಧಿಕಾರಿ ತರುನ್ನಂ ಬೆಂಗಾಲಿ, ಮಲ್ಲಿಕಾರ್ಜುನ ಜಾಗೂರ್, ಕಾರ್ಮಿಕ ನಿರೀಕ್ಷಕರಾದ ರಮೇಶ ಕೆಸರೂರ, ರಾಜೇಶ ಅಸ್ನೋಟಿಕರ್ ಸೇರಿದಂತೆ ಮತ್ತಿತರು ಹಾಜರಿದ್ದರು.

Related Articles

Back to top button