ಪ್ರಗತಿವಾಹಿನಿ ಸುದ್ದಿ, ಮೈಸೂರು, ಜ.23: ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರಿಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಭರವಸೆ ನೀಡಿದ್ದಾರೆ.
ಮೈಸೂರಿನ ಜಲ ದರ್ಶಿನಿ ಅತಿಥಿಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ್ದ ಅಖಂಡ ಕರ್ನಾಟಕ ರೈತ ಒಕ್ಕೂಟದ ಸದಸ್ಯರಿಂದ ಮನವಿ ಸ್ವೀಕರಿಸಿ ಮಾತಾಡಿದ ಅವರು, ಕೆಲವರು ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಅರಣ್ಯ ಒತ್ತುವರಿ ಮಾಡಿದ್ದು ಅಂತಹವರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು.
ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ.ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆ ಸರ್ಕಾರದ ಹೊಣೆಯಾಗಿದೆ. ಅರಣ್ಯ ಭೂಮಿ ಕ್ಷೀಣಿಸಿದರೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತದೆ ಹೀಗಾಗಿ ಅರಣ್ಯ ಸಂರಕ್ಷಣೆ ನಿಮ್ಮ ಕರ್ತವ್ಯವೂ ಆಗಿದೆ ಎಂದರು.
ಶಾಸಕರಾದ ದರ್ಶನ್ ಧ್ರುವನಾರಾಯಣ್ ಉಪಸ್ಥಿತರಿದ್ದರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ