Kannada NewsKarnataka NewsLatest

*ನಿಗಮ-ಮಂಡಳಿ ನೇಮಕ ಪಟ್ಟಿ: ಗೃಹ ಸಚಿವ ಪರಮೇಶ್ವರ್ ಗರಂ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ನಿಗಮ-ಮಂಡಳಿಗಳ ನೇಮಕಾತಿ ವಿಚಾರದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಪಸ್ವರದ ಮಾತುಗಳನ್ನಾಡಿದ್ದಾರೆ. ನಿಗಮ-ಮಂಡಳಿ ನೇಮಕ ಪಟ್ಟಿ ಸಿದ್ಧಪಡಿಸುವಾಗ ನಮ್ಮ ಅಭಿಪ್ರಾಯವನ್ನೇ ಕೇಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗಳಿಗೆ ಒಂದೆರೆಡು ಹೆಸರು ಕೊಡಿಯೆಂದು ಕೇಳಿದ್ದರು; ಕೊಟ್ಟಿದ್ದೇವೆ ಅಷ್ಟೇ. ಆದರೆ, ನಮ್ಮ ಜೊತೆ ಚರ್ಚಿಸಿ ಪಟ್ಟಿ ಮಾಡಿಲ್ಲ ಎಂದರು.

ನಾನು ಸಹ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಯಾರೆಲ್ಲ ಕೆಲಸ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಹತ್ತಾರು ವರ್ಷ ಪಕ್ಷಕ್ಕೆ ದುಡಿದವರಿದ್ದಾರೆ. ಅವರಿಗೆ ಅಧಿಕಾರ ಕೊಡಬೇಕು. ನಮ್ಮ ಅಭಿಪ್ರಾಯ ಪಡೆಯದೇ ಇರುವುದರಿಂದ ಹೀಗಾಗುತ್ತಿದೆ ಅವರು ಹೇಳಿದರು.

ಕೆಲಸ ಮಾಡದವರಿಗೆ ಅಧಿಕಾರ ಕೊಟ್ಟರೆ ಬೇಜಾರು
ಪಕ್ಷದಲ್ಲಿ ಕೆಲಸ ಮಾಡದವರಿಗೆ ಅಧಿಕಾರ ಕೊಟ್ಟರೆ, ಕೆಲಸ ಮಾಡಿರುವವರಿಗೆ ತುಂಬಾ ನೋವು, ಅಸಮಾಧಾನವಾಗುತ್ತದೆ. ಹೀಗಾಗಿ ಮುಖಂಡರು, ಜಿಲ್ಲಾ ಅಧ್ಯಕ್ಷರ ಸಲಹೆಗಳನ್ನು ಕೇಳಬೇಕಾಗುತ್ತದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾ ನಾಯಕರೊಂದಿಗೆ ಚರ್ಚಿಸಿ ಪಟ್ಟಿ ಮಾಡಬೇಕು. ಅದರೆ, ಈಗ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರೇ ಮಾಡುತ್ತಿದ್ದಾರೆ. ಹೀಗಾಗಿ ಪಟ್ಟಿ ಸಿದ್ಧಪಡಿಸುವುದು ನಿಧಾನವಾಗಿದೆ ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button