Kannada NewsKarnataka NewsLatest
*ಬಹುಮಾನ ಪಡೆಯಲು ವೇದಿಕೆಗೆ ಬಂದ ಯುವಕ; ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಬಹುಮಾನ ಪಡೆಯುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ರಾಬಿನ್ (22) ಮೃತ ವ್ಯಕ್ತಿ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. 2-3 ಪಂದ್ಯಗಳಲ್ಲಿ ಆಡಿ ಗೆಲುವಿಗೆ ಕಾರಣನಾಗಿದ್ದ ಯುವಕ.
ಪಂದ್ಯ ಗೆದ್ದ ರಾಬಿನ್ ಗೆ ಬಹುಮನ ಘೋಷಣೆಯಾಗಿತ್ತು. ಬಹುಮಾನ ಪಡೆಯಲು ವೇದಿಕೆಗೆ ಬರುತ್ತಿದ್ದಂತೆ ಏಕಾಏಕಿ ಯುವಕ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.



