ಪ್ರಗತಿವಾಹಿನಿ ಸುದ್ದಿ: ಬಿಹರದಲ್ಲಿ ಕ್ಷಿಪ್ರ ರಾಜಕೀಯ ಬ್ಬೆಳವಣಿಗೆಗಳು ನಡೆಯುತ್ತಿದ್ದು, ಜೆದಿಯು-ಆರ್ ಜೆಡಿ ಮೈತ್ರಿ ಸರ್ಕಾರ ಪತನವಾಗಿದೆ. ಜೆಡಿಯು ನಯಕ ನಿತೀಶ್ ಕುಮಾರ್ ಬಿಹರ ಮುಖ್ಯಮಂತ್ರಿ ಸ್ಥನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಟ್ನಾದಲ್ಲಿ ರಾಜಭವನಕ್ಕೆ ತೆರಳಿದ ಸಿಎಂ ನಿತೀಶ್ ಕುಮಾರ್, ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಬೆನ್ನಲ್ಲೇ ಆರ್ ಜೆಡಿ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ.
ಇನ್ನು ನಿತೀಶ್ ಕುಮರ್ ಎನ್ ಡಿಎ ಬೆಂಬಲದೊಂದಿಗೆ ಹೊಸ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದಾರೆ. ಇಂದು ಸಂಜೆ ಬಿಜೆಪಿ ಶಾಸಕರ ಬೆಂಬಲ ಪಡೆದು ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಒಟ್ಟಾರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದು ಇಂಡಿಯಾ ಮೈತ್ರಿಕೂಟಕ್ಕೆ ಪೆಟ್ಟು ಬಿದ್ದಂತಾಗಿದೆ ಎಂದು ಹೇಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ