Kannada NewsKarnataka NewsLatestPolitics

*ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ವಿಚಾರ; ಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ 25 ನೇ ವರ್ಷದ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ಹಿತ ಕಾಯಲು ಸರ್ಕಾರ ಬದ್ದವಾಗಿದೆ. ಶ್ರಮಿಕ ವರ್ಗದ ಜನ ಈ ನಾಡಿನ ಆಸ್ತಿ. ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ರಕ್ಷಣೆ ನಮ್ಮ ಕರ್ತವ್ಯ. ನಾವು ನಿಮ್ಮ ಜತೆಗೆ ಇದ್ದೇವೆ ಎಂದರು.

ಇಂದು ಹುತಾತ್ಮರ ದಿನ. ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಶ್ರೀರಾಮನ ಅಪಾರ ಭಕ್ತ ಮಹಾತ್ಮಗಾಂಧಿಯನ್ನು ನಾಥೂರಾಂ ಗೋಡ್ಸೆ ಕೊಂದು ಹಾಕಿದ ದಿನ. ಹಂತಕ ಗೋಡ್ಸೆ ಬೆಂಬಲಕ್ಕೆ ನಿಂತಿರುವವರು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರು ಸಮಾಜ ವಿರೋಧಿಗಳು ಎಂದರು.

ವಸತಿ ಸಚಿವ ಜಮೀರ್ ಅಹಮದ್, ಶೃಂಗೇರಿ ಶಾಸಕರಾದ ರಾಜುಗೌಡ, ಅಸೋಸಿಯೇಷನ್ ಅಧ್ಯಕ್ಷರಾದ ನಾರಾಯಣ್ ಸೇರಿ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button