Kannada NewsLatestNationalPolitics
*ರಾಹುಲ್ ಗಾಂಧಿ ಬೆಂಗಾವಲು ವಾಹನದ ಮೇಲೆ ದಾಳಿ ; ಕಿಡಿಗೇಡಿಗಳಿಂದ ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಬೆಂಗಾವಲು ವಾಹನದ ಗಾಜುಗಳು ಪುಡಿ ಪುಡಿಯಾಗಿವೆ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಬೆಂಗಾವಲು ಪಡೆ ಗುರಿಯಾಗಿಸಿ ಕಿಡಿಗೇಡಿಗಳು ಈ ದಾಳಿ ನಡೆಸಿದ್ದಾರೆ. ಮಣಿಪುರದಿಂದ ಆರಂಭವಾಗಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಪಶ್ಚಿಮ ಬಂಗಾಳ ತಲುಪಿದ್ದು, ಈ ವೇಳೆ ಮಾಲ್ಡಾದಲ್ಲಿ ಈ ಘಟನೆ ನಡೆದಿದೆ.