Belagavi NewsBelgaum NewsKannada News

24 ಗಂಟೆಗಳಲ್ಲಿ ಕಡತಗಳ ವಿಲೇವಾರಿ ಕೈಗೊಳ್ಳಿ: ಜಿಪಂ ಸಿಇಓ ರಾಹುಲ್ ಶಿಂಧೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲಾ ಪಂಚಾಯತ ಕಚೇರಿಯ ಕಡತಗಳನ್ನು ೨೪ ಗಂಟೆಗಳಲ್ಲಿ ವಿಲೇವಾರಿ ಮಾಡಬೇಕೆಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಸೂಚಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಜಿಲ್ಲಾ ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿ ಶ್ರಮ ವಹಿಸಬೇಕು. ಸರ್ಕಾರಿ ಮಟ್ಟದ ಪತ್ರಗಳು ಹಾಗೂ ಸ್ಥಳಿಯ ಪತ್ರಗಳಿಗೆ ಆದ್ಯತೆ ನೀಡಿ ೨೪ ಗಂಟೆಗಳಲ್ಲಿ ಕಡತಗಳನ್ನು ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಿದರು. ಪ್ರತಿ ಮಾಸಿಕದ ಮೊದಲನೇ ದಿನದಂದು ಕಚೇರಿ ಸಿಬ್ಬಂದಿಗಳ ಸಭೆಯನ್ನು ನಡೆಸಲಾಗುವುದು, ಕಚೇರಿ ಅಧಿಕಾರಿ ಹಾಗೂ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ರಾಷ್ಟ್ರೀಯ ಕಾರ್ಯಕ್ರಮಗಳಿಗೆ ಹಾಜರಿದ್ದು, ಹಬ್ಬದಂತೆ ಅಚರಣೆ ಮಾಡಲು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳಾದ ಬಸವರಾಜ ಹೆಗನಾಯಕ, ಬಸವರಾಜ ಅಡವಿಮಠ, ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button