Kannada NewsKarnataka NewsLatest

*ಸಂಸದ ಡಿ.ಕೆ.ಸುರೇಶ್ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಏಕಾಏಕಿ ಮುತ್ತಿಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಕೇಂದ್ರದಿಂದ ಅನ್ಯಾಯವಾಗಿದೆ. ಈ ರೀತಿಯಾದರೆ ದೇಶ ವಿಭಜನೆ ಮಾಡಬೇಕಾಗುತ್ತದೆ ಎಂಬ ರೀತಿಯಲ್ಲಿ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಬೀದಿಗಿಳಿದು ಹೋರಾಟ ನಡೆಸಿರುವ ಬಿಜೆಪಿ ಕಾರ್ಯಕರ್ತರು ಸದಾಶಿವ ನಗರ ಬಳಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಹಲವು ಕಾರ್ಯಕರ್ತರು ಸಂಸದ ಡಿ.ಕೆ.ಸುರೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ನಿವಾಸದತ್ತ ಮುನ್ನುಗ್ಗಿದ್ದಾರೆ.

ಡಿ.ಕೆ.ಸುರೇಶ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಡಿ.ಕೆ.ಸುರೇಶ್ ನಿವಾಸದ ಬಳಿ ಹೈಡ್ರಾಮಾ ನಡೆದಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.


Related Articles

Back to top button