Kannada NewsKarnataka NewsLatestPolitics

*ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಅಶ್ಲೀಲ ಮೆಸೇಜ್ ಕುಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಪಿಎಸ್ ಐ ನಿಖಿಲ್ ಕಾಂಬ್ಳೆ ಹಾಗೂ ಕಾನ್ಸ್ಟೇಬಲ್ ಶಂಕರ್ ನಾಲಕರ್ ಅಮಾನತುಗೊಂಡವರು.

ಕಳದ ಒಂದು ವರ್ಷದಿಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಪಿಎಸ್ ಐ ನಿಖಿಲ್ ಕಾಂಬ್ಳೆ ಹಾಗೂ ಕಾನ್ಸ್ಟೇಬಲ್ ಶಂಕರ್ ನಾಲಕರ್ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದರಂತೆ. ಯಾರಿಂದಲೋ ವಿದ್ಯಾರ್ಥಿನಿಯ ನಂಬರ್ ಪಡೆದು ಅಶ್ಲೀಲ ಮೆಸೇಜ್ ಕಳುಹಿಸುವುದು, ವಿದ್ಯಾರ್ಥಿನಿಯ ಹೆಸರು ಹಾಳು ಮಾಡುವುದು ಮಾಡುತ್ತಿದ್ದರಂತೆ.

ಗದಗ ಎಸ್ ಪಿಗೆ ದೂರು ನೀಡುವುದಾಗಿ ಹೇಳಿದರೂ ಪೊಲೀಸ್ ಸಿಬ್ಬಂದಿ ತಮ್ಮ ಚಾಳಿ ಬಿಡಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತ ವಿದ್ಯಾರ್ಥಿನಿ ನೇರವಾಗಿ ಗದಗ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಳು.

Home add -Advt

ಇದೀಗ ಎಸ್ ಪಿ ಬಿ.ಎಸ್.ನೇಮಗೌಡ ಪಿಎಸ್ ಐ ನಿಖಿಲ್ ಕಾಂಬ್ಳೆ ಹಾಗೂ ಕಾನ್ಸ್ಟೇಬಲ್ ಶಂಕರ್ ನಾಲಕರ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಇಬ್ಬರ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ.

Related Articles

Back to top button