Kannada NewsKarnataka NewsLatest

*FDA ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ಜನನ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಕೈಯೊಡ್ಡಿದ್ದ ಎಫ್ ಡಿಎ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಪಾಲಿಕೆಯ ಎಫ್ ಡಿಎ ಅಧಿಕಾರಿ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದವರು. ಶಿವಮೊಗ್ಗ ಪಾಲಿಕೆಯ ಜನನ ಮತ್ತು ಮರಣ ನೊಂದಣಾಧಿಕಾರಿ ಕಚೇರಿಯಲ್ಲಿ ಎಫ್ ಡಿಎ ಅಧಿಕಾರಿಯಾಗಿರುವ ನಾಗರಾಜ್ ಕೆಲಸ ಮಾಡುತ್ತಿದ್ದರು.

Home add -Advt

ಜನನ ಪ್ರಮಾಣ ಪತ್ರ ನೀಡಲು 1 ಸಾವಿರ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಡಿವೈ ಎಸ್ ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ನಾಗರಾಜ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.


Related Articles

Back to top button