Belagavi NewsBelgaum NewsEducationKannada NewsKarnataka News

ಶಾಲೆಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಗಂಭೀರ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ಹಾಗೂ ಶಾಲೆಗಳಿಗೆ ದಿಢೀರ್ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಶೌಚಾಲಯ ಹಾಗೂ ಮೂತ್ರಾಲಗಳಲ್ಲಿ ಅಸ್ವಚ್ಛತೆ ಕಂಡು ಬಂದಲ್ಲಿ ಸಂಬಂಧಿಸಿದ ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ‌ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು.

ನಗರದ ಡಿಡಿಪಿಐ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ವಲಯದಲ್ಲಿ ಶೌಚಾಲಯಗಳು ಅವಶ್ಯಕತೆ ಇರುವ ಶಾಲೆಗಳನ್ನು ಪಟ್ಟಿ ಮಾಡಬೇಕು. ಪ್ರತಿ ಶಾಲೆ ವಿದ್ಯುತ್ ಸೌಕರ್ಯ ಹೊಂದಿರಬೇಕು. ವಿದ್ಯುತ್ ಸೌಲಭ್ಯವಿಲ್ಲದಿದ್ದಲ್ಲಿ ಅಂತಹ ಶಾಲೆಗಳ ಪಟ್ಟಿ ತಯಾರಿಸಿ ಹೆಸ್ಕಾಂ ಅಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಿದರು.

ಶಾಲೆಗಳಲ್ಲಿರುವ ಡೆಸ್ಕ್ ಗಳ ಸಂಖ್ಯೆ ಪರಿಶೀಲಿಸಿ ಹೆಚ್ಚಾಗಿರುವ ಶಾಲೆಗಳಿಂದ ಅವಶ್ಯಕತೆ ಇರುವ ಶಾಲೆಗಳಿಗೆ ಹಸ್ತಾಂತರಿಸುವ ಕಾರ್ಯವನ್ನು ಬಿ.ಆರ್.ಸಿ.ಗಳು ಒಳಗೊಂಡ ತಂಡ ರಚಿಸಿಕೊಂಡು ಅಭಿಯಾನ ನಡೆಸಬೇಕು.

ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪೂರ್ವ ತಯಾರಿ ನಡೆಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪ್ರಗತಿಗಾಗಿ ರೆಮಿಡಿಯಲ್ ಕ್ಲಾಸ್ ಮಾಡಬೇಕು. ಕಡಿಮೆ ಫಲಿತಾಂಶ ಬಂದ ವಿಷಯಕ್ಕೆ ಹೆಚ್ಚು ಒತ್ತು ನೋಡಿ ಮಕ್ಕಳ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು

ಪದವಿ ಪೂರ್ವ ಉಪನಿರ್ದೇಶಕರಾದ  ಕಾಂಬಳೆ, ಬೆಳಗಾವಿ ಹಾಗೂ ಚಿಕ್ಕೋಡಿಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮೋಹನಕುಮಾರ ಹಂಚಾಟೆ, ಡಿ.ಡಿಪಿ.ಐ ಅಭಿವೃದ್ದಿ ಎಸ್. ಡಿ, ಗಾಂಜಿ, ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿಗಳು ಬಿ.ಎಚ್.ಮಿಲ್ಲಾನಟ್ಟಿ ಹಾಗೂ ಬೆಳಗಾವಿ & ಚಿಕ್ಕೋಡಿಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button