*ಅಯೋಧ್ಯೆಯಲ್ಲಿ ಸುತ್ತೂರು ಮಠ ಶಾಖೆ ತೆರೆಯಲು ನಿರ್ಧಾರ: ಅಮಿತ್ ಶಾ ಸಂತಸ*
ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಅಮಿತ್ ಶಾ
ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖೆ ತೆರೆಯಲು ಶ್ರೀಗಳು ನಿರ್ಧರಿಸಿದ್ದು, ಅಭಿನಂದನೀಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನೆರವೇರಿದ ಬೆನ್ನಲ್ಲೇ ಇಲ್ಲಿನ ಸುತ್ತೂರು ಶ್ರೀಗಳು ಈಗ ಅಲ್ಲಿ ತಮ್ಮ ಶಾಖಾ ಮಠ ತೆರೆಯುವುದು ನುಡಿದಿರುವುದು ಸಂತಸ ತಂದಿದೆ ಎಂದು ಹೇಳಿದರು.
ಬಾಲ ಶ್ರೀರಾಮನ ವಿಗ್ರಹ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಅಮಿತ್ ಶಾ ಸನ್ಮಾನಿಸಿದರು.
ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮೈಸೂರಿನ ಆದಿ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಪ್ರತಾಪ ಸಿಂಹ, ಬಿಜೆಪಿ ಜಿಲ್ಲಾಧ್ಯಕ್ಷರಾದ ಎಲ್. ನಾಗೇಂದ್ರ, ಎಲ್.ಆರ್. ಮಹದೇವಸ್ವಾಮಿ ಮತ್ತಿತರರು ಜತೆಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ