ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : 2024 -25ನೇ ಸಾಲಿನ ಆಯವ್ಯಯ ಸಿದ್ಧತೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ 7ನೇ ವೇತನ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಸೋಮವಾರ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರ ಭಾಷಣ ನಡೆಯಲಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ.
ಬಜೆಟ್ ಪೂರ್ವಭಾವಿಯಾಗಿ ಮುಖ್ಯಮಂತ್ರಿಗಳು ವಿವಿಧ ಸಮಾಜ, ಸಂಘಟನೆ, ಸಮಿತಿಗಳೊಂದಿಗೆ ಪ್ರತಿ ನಿತ್ಯ ಚರ್ಚೆ ನಡೆಸುತ್ತಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ 7ನೇ ವೇತನ ಆಯೋಗದ ಅಧ್ಯಕ್ಷ, ಸದಸ್ಯರ ಜೊತೆ ಸಭೆ ನಿಗದಿಯಾಗಿದೆ.
7ನೇ ವೇತನ ಆಯೋಗ ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಬೇಕಿದ್ದು, ಇದೇ ಏಪ್ರಿಲ್ ನಿಂದ ಆಯೋಗದ ವರದಿ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಜೆಟ್ ನಲ್ಲಿ ಹೆಚ್ಚುವರಿ ಹಣ ಕಾಯ್ದಿರಿಸಬೇಕಾದ ಜವಾಬ್ದಾರಿ ಸರಕಾರದ ಮೇಲಿದೆ. ಈ ಹಿನ್ನೆಲೆಯಲ್ಲಿ ಈ ಚರ್ಚೆ ನಡೆಯುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ