Kannada NewsKarnataka NewsLatest

*ಕಾಂಗ್ರೆಸ್ ಮುಖಂಡನ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಡಾ.ಶಶಿಧರ ಹಟ್ಟಿ*

ಪ್ರಗತಿವಾಹಿನಿ ಸುದ್ದಿ: ಮರಳು ದಂಧೆಗೆ ಕಾಂಗ್ರೆಸ್ ಮುಖಂಡರೊಬ್ಬರು ಬಲಿಯಾಗಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಡೆದಿದೆ.

ಡಾ.ಶಶಿಧರ ಹಟ್ಟಿ ಆತ್ಮಹತ್ಯೆಗೆ ಶರಣಾದವರು. ತಮ್ಮದೇ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ.

Home add -Advt

ಡೆತ್ ನೋಟ್ ನಲ್ಲಿ ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರನ್ನು ಉಲ್ಲೇಖಿಸಿದ್ದಾರೆ. ಎಲ್ಲಾ ಲೆಕ್ಕ ಕೊಟ್ಟರೂ ಶರಣಗೌಡ ಪಾಟೀಲ್ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್ ಅವರಿಗೆ ಹೇಳಿ ಶರಣಗೌಡ ಪಾಟೀಲ್ ಗೆ ಕಠಿಣ ಶಿಕ್ಷೆ ಕೊಡಿಸಿ ಎಂದು ಪತ್ರದಲ್ಲಿ ಬರೆದಿದ್ದಾರೆ.

ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button