Kannada NewsKarnataka NewsLatestPolitics

*ಡ್ಯಾಶ್ ಬೋರ್ಡ್ ನಲ್ಲಿ ಮಾಹಿತಿಯೇ ಡಿಲೀಟ್: ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಸುಳ್ಳುರಾಮಯ್ಯ; ಪ್ರಹ್ಲಾದ್ ಜೋಶಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಸರಿಯಾಗಿ ಸರ್ಕಾರ ನಿರ್ವಹಿಸಲಾಗಿದೆ ಕೇಂದ್ರದ ಮೇಲೆ ಬೊಟ್ಟು ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸುಳ್ಳು ಹೇಳೋದನ್ನು ಸಿಎಂ ಸ್ವಭಾವ ಮಾಡಿಕೊಂಡಿದ್ದಾರೆ. ಹಾಗಾಗಿ ನಾನು ಅವರನ್ನು ಸುಳ್ಳುರಾಮಯ್ಯ ಎಂದು ಕರೆಯುತ್ತೇನೆ ಎಂದರು.

ಹತ್ತು ಸಲ ನಿವೃತ್ತಿ ಆಗಬೇಕಾಗುತ್ತದೆ: ನಾನು ಸುಳ್ಳು ಹೇಳಿದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜೋಶಿ, ಸಿದ್ದರಾಮಯ್ಯ ಪದೇಪದೆ ಸುಳ್ಳು ಹೇಳುತ್ತಲೇ ಇರುತ್ತಾರೆ. ಹೇಳೋದೆಲ್ಲವೂ ಸುಳ್ಳೇ. ಹತ್ತು ಬಾರಿ ನಿವೃತ್ತಿ ಪಡೆಯಬೇಕಾಗುತ್ತದೆ ಎಂದು ಲೇವಡಿ ಮಾಡಿದರು.

NDRF ಫಂಡ್​ನಲ್ಲಿ ಯುಪಿಎ ಯಾವತ್ತೂ ಹೆಚ್ಚು ಹಣ ಕೊಟ್ಟಿಲ್ಲ. ಆದರೆ, ಹೆಚ್ಚುವರಿ ಮಾತ್ರವಲ್ಲ ಅಡ್ವಾನ್ಸ್ ಹಣ ಕೊಡ್ತೀದ್ದೇವೆ. ಇನ್ನು, ಒಂದೇ ಒಂದು ರೂಪಾಯಿ GST ಹಣ ಕೂಡ ಬಾಕಿ ಇಲ್ಲ. 10 ವರ್ಷ ಪ್ರಧಾನಿ ಮೋದಿ ಅವರ ಅವಧಿಯಲ್ಲಿ ಕೇಂದ್ರ ಪಾಲಿನ ತೆರಿಗೆ ಹಂಚಿಕೆಯಲ್ಲಿ 2.85 ಲಕ್ಷ ಕೋಟಿ ಕೊಟ್ಟಿದ್ದೇವೆ ಎಂದು ಜೋಶಿ ವಿವರಿಸಿದರು.

ಕೇಂದ್ರದಿಂದ ಯಾವುದೇ ವಿಶೇಷ ಗ್ರ್ಯಾಂಟ್ ಕೊಟ್ಟಿಲ್ಲ ಅಂತೀದಾರೆ. ಆದರೆ ಕರ್ನಾಟಕ ಸರ್ಕಾರಕ್ಕೆ 50 ವರ್ಷ ಅವಧಿಗೆ 6279 ಕೋಟಿ ರು. ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ ಎಂದು ಜೋಶಿ ಸ್ಪಷ್ಟಪಡಿಸಿದರು.

ಕೊಟ್ಟ ಅನುದಾನ ಬಳಕೆ ಮಾಡಿಲ್ಲ: ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ನೀಡಿದ
ಅನುದಾನ ಸಂಪೂರ್ಣ ಬಳಕೆಯೇ ಆಗಿಲ್ಲ. ಫೆಬ್ರವರಿ ಅಂತ್ಯ ಬಂದರೂ ಶೇ. 30 ರಿಂದ 38 ರಷ್ಟು ಅನುದಾನ ಖರ್ಚು ಆಗದೇ ಉಳಿದಿದೆ.

ಮಾಹಿತಿ ಡಿಲೀಟ್: ಅನುದಾನ ವಿಚಾರವಾಗಿ ರಾಜ್ಯ ಸರ್ಕಾರದ ಡ್ಯಾಶ್ ಬೋರ್ಡ್ ನಲ್ಲಿ ಎಲ್ಲ ಮಾಹಿತಿ ಹಾಕಿದ್ರು. ಅದನ್ನು ಡೌನ್​ಲೋಡ್ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಿದ್ದೆ. ಅಷ್ಟರಲ್ಲಿ ಆಗಲೇ ಅಂಕಿ-ಅಂಶವೇ ಡಿಲೀಟ್ ಆಗಿದೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಇಲ್ಲಸಲ್ಲದ್ದನ್ನು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಜೋಶಿ ಗಂಭೀರ ಆರೋಪ ಮಾಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button