Belagavi NewsBelgaum NewsKannada NewsKarnataka News

ರಾಜ್ಯ ಬಜೆಟ್ ಅಭಿವೃದ್ಧಿಪರವಾಗಿಲ್ಲ : ಡಾ.ಪ್ರಭಾಕರ ಕೋರೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರದ ಬಜೆಟ್ ಬಡವರ ಹಾಗೂ ರೈತರ ಹಿತಕಾಪಾಡಿಲ್ಲ ಎಂದು ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಗ್ಯಾರಂಟಿಗಳ ಭರಾಟೆಯಲ್ಲಿ ರಾಜ್ಯವನ್ನು ಆರ್ಥಿಕವಾಗಿ ಮತ್ತಷ್ಟು ದಿವಾಳಿಯತ್ತ ಕೊಂಡೊಯ್ದಿದೆ. ಗ್ಯಾರಂಟಿಗಳನ್ನು ಈಡೇರಿಸುವುದಕ್ಕಾಗಿ ಹೆಚ್ಚಿನ ಹಣವನ್ನು ಮೀಸಲಾಗಿಟ್ಟಿರುವುದು, ಇತರ ಅಭಿವೃದ್ಧಿ ಕಾಮಗಾರಿಗಳನ್ನು ಗೌಣವಾಗಿ ಕಂಡಿರುವುದು ವಿಪರ್ಯಾಸ. ಚಿಕ್ಕ ಹಾಗೂ ಬೃಹತ್ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನತೆಯ ಮತವನ್ನು ಸೆಳೆಯಲು ಜನತೆಯ ದಿಕ್ಕನ್ನು ತಪ್ಪಿಸುತ್ತಿದೆ. ಇದೊಂದು ಅಭಿವೃದ್ಧಿ ಪರವಾದ ಬಜೆಟ್ ಅಲ್ಲವೇ ಅಲ್ಲ. ಅಯೋಧ್ಯೆಯಲ್ಲಿ ಕರ್ನಾಟಕದ ರಾಮಭಕ್ತರಿಗೆ ಇರಲು ಸಂಕೀರ್ಣವನ್ನು ನಿರ್ಮಿಸುವ ಯೋಜನೆಯನ್ನು ಪ್ರಸ್ತಾಪಿಸಬೇಕಾಗಿತ್ತು, ಅದನ್ನೂ ಮಾಡಿಲ್ಲ ಎಂದು ಕೋರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button